ಡೆಮೊಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಸ್ಪರ್ಧೆ: ಪ್ರಥಮ ಹಂತದಲ್ಲಿ ಬೈಡನ್‍ಗೆ ಗೆಲುವು

Update: 2024-02-04 17:00 GMT

ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿರುವ ಡೆಮೊಕ್ರಟಿಕ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಡೆದ ಪ್ರಾಥಮಿಕ ಹಂತದ ಸ್ಪರ್ಧೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡನ್ ಗೆಲುವು ಸಾಧಿಸಿದ್ದಾರೆ.

ಸೌತ್ ಕ್ಯರೊಲಿನಾದಲ್ಲಿ ನಡೆದ ಡೆಮೊಕ್ರಟಿಕ್ ಪ್ರಾಥಮಿಕ ಚುನಾವಣೆಯಲ್ಲಿ ತನ್ನ ಇಬ್ಬರು ಪ್ರತಿಸ್ಪರ್ಧಿಗಳಾದ ಡೀನ್ ಫಿಲಿಪ್ಸ್ ಮತ್ತು ಮರಿಯಾನ ವಿಲಿಯಮ್ಸನ್ ಎದುರು ಭರ್ಜರಿ ಗೆಲುವಿನ ನಗೆ ಬೀರಿದ್ದಾರೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. 4 ವರ್ಷದ ಹಿಂದೆ ಸೌತ್ ಕ್ಯರೊಲಿನಾದಲ್ಲಿ ನಡೆದಿದ್ದ ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಭಿಯಾನ ಆರಂಭಿಸಿದ್ದ ಬೈಡನ್ ಅಂತಿಮವಾಗಿ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಎದುರು ಗೆದ್ದಿದ್ದರು. ಈ ಬಾರಿಯೂ ಸೌತ್ ಕ್ಯರೋಲಿನಾದ ಮತದಾರರು ತನ್ನನ್ನು ಬೆಂಬಲಿಸಿದ್ದು 4 ವರ್ಷದ ಹಿಂದಿನ ಫಲಿತಾಂಶ ಮರುಕಳಿಸಲಿದೆ ಎಂದು ಬೈಡನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗೆಲುವು ಪಡೆದ ಬಳಿಕ, ನವೆಂಬರ್‍ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಸಂಭಾವ್ಯ ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸಿದ ಬೈಡನ್ `ಟ್ರಂಪ್ ಸೋಲು ಒಪ್ಪಿಕೊಳ್ಳುವಂತೆ ಮಾಡುತ್ತೇನೆ' ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News