ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್

Update: 2023-12-22 17:21 GMT

ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‍ ಖಾನ್ 2024ರ ಸಾರ್ವತ್ರಿಕ ಚುನಾವಣೆಗೆ ತಮ್ಮ ಹುಟ್ಟೂರು ಮಿಯಾನ್‍ವಾಲಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿರುವುದಾಗಿ ಜಿಯೊ ನ್ಯೂಸ್ ವರದಿ ಮಾಡಿದೆ.

ಈ ಮಧ್ಯೆ,  ಸೈಫರ್ ಪ್ರಕರಣ(ದೇಶದ ರಹಸ್ಯ ಸೋರಿಕೆ)ದಲ್ಲಿ ಇಮ್ರಾನ್‍ಖಾನ್ ಹಾಗೂ ಅವರ ಆಪ್ತ ಶಾ ಮಸೂದ್ ಖುರೇಷಿಗೆ ಪಾಕಿಸ್ತಾನದ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಮಂಜೂರುಗೊಳಿಸಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News