ಜಪಾನ್ ನಲ್ಲಿ ಪ್ರಬಲ ಭೂಕಂಪ

Update: 2024-04-02 02:55 GMT

Photo: iStock

ಟೋಕಿಯೊ: ಉತ್ತರ ಜಪಾನ್ ನ ಇವೇಟ್ ಮತ್ತು ಒಮೋರಿ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನಿನ ಹವಾಮಾನ ಇಲಾಖೆ ಪ್ರಕಟಿಸಿದೆ.

ಭೂಕಂಪದ ಕೇಂದ್ರ ಬಿಂದು ಇವೇಟ್ ಪ್ರಾಂತ್ಯದ ಉತ್ತರ ಕರಾವಳಿ ಭಾಗದಲ್ಲಿತ್ತು. ಈ ಸಂಬಂಧ ಯಾವುದೇ ಸುನಾಮಿ ಭೀತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News