ವೃದ್ಧರ ಆರೈಕೆ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ: 11 ಮಂದಿ ಸಜೀವ ದಹನ

Update: 2023-08-09 18:06 GMT

ಸಾಂದರ್ಭಿಕ ಚಿತ್ರ

ಪ್ಯಾರಿಸ್: ಪೂರ್ವ ಫ್ರಾನ್ಸ್ನಲ್ಲಿನ ವೃದ್ಧರ ಆರೈಕೆ ಕೇಂದ್ರದಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ  11 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. 

ಆರೈಕೆ ಕೇಂದ್ರದ ಮೇಲಿನ ಮಹಡಿಯಲ್ಲಿ ಮಲಗಿದ್ದ 11 ಮಂದಿ ಸಜೀವ ದಹನಗೊಂಡಿದ್ದರೆ, 5 ಮಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ. ನೆಲ ಮಹಡಿಯಲ್ಲಿದ್ದ 12 ಮಂದಿಯನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News