ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾವಿಸಿದ ಎರ್ಡೋಗನ್

Update: 2023-09-20 17:41 GMT

Photo: NDTV

ವಿಶ್ವಸಂಸ್ಥೆ : ವಿಶ್ವಸಂಸ್ಥೆಯಲ್ಲಿ ನಡೆದ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 78ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೋಗನ್ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

`ದಕ್ಷಿಣ ಏಶ್ಯಾದಲ್ಲಿ ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ದಾರಿ ಮಾಡಿಕೊಡುವ ಮತ್ತೊಂದು ಬೆಳವಣಿಗೆಯೆಂದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆ ಮತ್ತು ಸಹಕಾರದ ಮೂಲಕ ಕಾಶ್ಮೀರದಲ್ಲಿ ನ್ಯಾಯಯುತ ಮತ್ತು ಶಾಶ್ವತವಾದ ಶಾಂತಿಯನ್ನು ಸ್ಥಾಪಿಸುವುದು. ಈ ದಿಸೆಯಲ್ಲಿ ಕೈಗೊಳ್ಳಲಾಗುವ ಕ್ರಮಗಳಿಗೆ ನಾವು ಬೆಂಬಲವನ್ನು ಮುಂದುವರಿಸಲಿದ್ದೇವೆ ' ಎಂದು ಸಭೆಯಲ್ಲಿ ಎರ್ಡೋಗನ್ ಹೇಳಿದ್ದಾರೆ.   

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News