ಕರಾಚಿಯ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ದುರಂತ; ಕನಿಷ್ಠ 11 ಮಂದಿ ಸಾವು

Update: 2023-11-25 17:38 GMT

Photo: X//The_Nation

ಇಸ್ಲಮಾಬಾದ್ : ದಕ್ಷಿಣ ಪಾಕಿಸ್ತಾನದ ಕರಾಚಿ ನಗರದ ಶಾಪಿಂಗ್ ಮಾಲ್ನಲ್ಲಿ ಶನಿವಾರ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಟ 11 ಮಂದಿ ಮೃತಪಟ್ಟಿದ್ದು ಇತರ 35 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮ ಜಿಯೊ ನ್ಯೂಸ್ ವರದಿ ಮಾಡಿದೆ.

ಕರಾಚಿಯ ಆರ್ಜೆ ಶಾಪಿಂಗ್ ಮಾಲ್ನ ಬಹುಮಹಡಿ ಕಟ್ಟಡದಲ್ಲಿ ಶನಿವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಕಟ್ಟಡದ ಇತರ ಭಾಗಗಳಿಗೂ ವ್ಯಾಪಿಸಿದೆ. ತಕ್ಷಣ ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 50 ಮಂದಿಯ ನ್ನು ರಕ್ಷಿಸಲಾಗಿದ್ದು ಇವರಲ್ಲಿ 35 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕನಿಷ್ಟ 11 ಮಂದಿ ಮೃತಪಟ್ಟಿದ್ದು ಕಟ್ಟಡದ ಒಳಗೆ ಇನ್ನೂ ಕೆಲವರು ಸಿಲುಕಿರುವ ಶಂಕೆಯಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News