ಪಾಕಿಸ್ತಾನ ಸ್ಟಾಕ್ ಎಕ್ಸ್‌ಚೇಂಜ್ ಕಟ್ಟಡದಲ್ಲಿ ಬೆಂಕಿ ದುರಂತ

Update: 2024-07-08 16:42 GMT

PC : PTI 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತದಲ್ಲಿರುವ ಕರಾಚಿ ನಗರದಲ್ಲಿನ ಸ್ಟಾಕ್ಎಕ್ಸ್ಚೇಂಜ್ (ಪಿಎಸ್ಎಕ್ಸ್)ಕಟ್ಟಡದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಪಿಎಸ್ಎಕ್ಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಪೊಲೀಸರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪಿಎಸ್ಎಕ್ಸ್ನ ಎರಡು ಕಚೇರಿಗಳಿಗೆ ಹಾನಿಯಾಗಿದೆ. ಆದರೆ ಯಾವುದೇ ಸಾವುನೋವು ವರದಿಯಾಗಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಪಡೆ ಬೆಂಕಿಯನ್ನು ನಿಯಂತ್ರಿಸಿದೆ ಎಂದು ದಕ್ಷಿಣದ ಉಪ ಆಯುಕ್ತ ಅಲ್ತಾಫ್ ಸರ್ಯೋಮ್ ಹೇಳಿದ್ದಾರೆ. ಮಧ್ಯಾಹ್ನದ ಬಳಿಕ ಪಿಎಸ್ಎಕ್ಸ್ ಮತ್ತೆ ಕಾರ್ಯಾರಂಭ ಮಾಡಿದೆ. ಬೆಂಕಿದುರಂತದ ಕಾರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News