ಗಾಝಾ | ಇಸ್ರೇಲ್ ದಾಳಿಯಲ್ಲಿ 12 ಮೃತ್ಯು

Update: 2024-08-04 16:42 GMT

ಸಾಂದರ್ಭಿಕ ಚಿತ್ರ | PC : NDTV

ಟೆಲ್ ಅವೀವ್ : ಗಾಝಾದಲ್ಲಿ ರವಿವಾರ ಇಸ್ರೇಲ್ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದರೆ, ಇಸ್ರೇಲ್ ರಾಜಧಾನಿ ಟೆಲ್ಅಅವೀವ್ ಹೊರವಲಯದಲ್ಲಿ ಫೆಲೆಸ್ತೀನ್ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಇಬ್ಬರನ್ನು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಗಾಝಾದ ಅಲ್-ಅಖ್ಸಾ ಆಸ್ಪತ್ರೆಯ ಆವರಣದಲ್ಲಿ ಸ್ಥಳಾಂತರಿತ ಜನರು ಆಶ್ರಯ ಪಡೆದಿದ್ದ ಟೆಂಟ್ ಮೇಲೆ ರವಿವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಒಬ್ಬ ಮಹಿಳೆ ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಸಚಿವಾಲಯ ಹೇಳಿದೆ.

ಉತ್ತರ ಗಾಝಾದಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಮನೆಯೊಂದು ನೆಲಸಮಗೊಂಡಿದ್ದು ಮೂವರು ಮಕ್ಕಳು, ಅವರ ಹೆತ್ತವರ ಸಹಿತ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಗಾಝಾ ನಗರದಲ್ಲಿ ನಿರಾಶ್ರಿತರ ಶಿಬಿರವಾಗಿ ಪರಿವರ್ತನೆಗೊಂಡಿರುವ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು ಇತರ 21 ಮಂದಿ ಗಾಯಗೊಂಡಿರುವುದಾಗಿ ಗಾಝಾ ಆರೋಗ್ಯ ಇಲಾಖೆ ಹೇಳಿದೆ.

ಈ ಮಧ್ಯೆ, ರವಿವಾರ ಇಸ್ರೇಲ್ ರಾಜಧಾನಿ ಟೆಲ್ಅವೀವ್ ನ ಪ್ರತ್ಯೇಕ ಪ್ರದೇಶದಲ್ಲಿ ನಡೆದ ಚೂರಿ ಇರಿತ ಘಟನೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು ಇತರ ಇಬ್ಬರು ಗಾಯಗೊಂಡಿದ್ದಾರೆ. ಆರೋಪಿ ಫೆಲೆಸ್ತೀನ್ ವ್ಯಕ್ತಿಯನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದ್ದು ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News