ಗಾಝಾ: ಇಸ್ರೇಲ್ ದಾಳಿಯಲ್ಲಿ 12 ಮಂದಿ ಮೃತ್ಯು

Update: 2024-08-24 16:36 GMT

   ಸಾಂದರ್ಭಿಕ ಚಿತ್ರ | PC :PTI

ಗಾಝಾ: ಗಾಝಾದ ಖಾನ್ ಯೂನಿಸ್ ನಗರದ ಪೂರ್ವದಲ್ಲಿ ಮತ್ತು ಅಲ್-ನುಸೀರತ್ ಶಿಬಿರ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಇಬ್ಬರು ಮಕ್ಕಳ ಸಹಿತ ಕನಿಷ್ಟ 12 ಫೆಲೆಸ್ತೀನೀಯರು ಮೃತಪಟ್ಟಿದ್ದು ಇತರ 15 ಮಂದಿ ಗಾಯಗೊಂಡಿರುವುದಾಗಿ ಫೆಲೆಸ್ತೀನ್‍ನ ವಫಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಶುಕ್ರವಾರ ಸಿರಿಯಾದ ಸೇನಾ ನೆಲೆಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಬೆಂಬಲಿತ ಮೂವರು ಹೋರಾಟಗಾರರು ಮೃತಪಟ್ಟಿದ್ದು ಇತರ 10 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News