ಗಾಝಾ: ಇಸ್ರೇಲ್ ದಾಳಿಯಲ್ಲಿ 17 ಮಂದಿ ಮೃತ್ಯು

Update: 2025-04-23 21:06 IST
ಗಾಝಾ: ಇಸ್ರೇಲ್ ದಾಳಿಯಲ್ಲಿ 17 ಮಂದಿ ಮೃತ್ಯು

ಸಾಂದರ್ಭಿಕ ಚಿತ್ರ | PC : aljazeera.com

  • whatsapp icon

ಗಾಝಾ ಸಿಟಿ: ಗಾಝಾ ನಗರದ ಹೊರವಲಯದಲ್ಲಿ ನಿರಾಶ್ರಿತರು ಆಶ್ರಯ ಪಡೆದಿದ್ದ ಶಾಲೆಯ ಕಟ್ಟಡವನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಏಜೆನ್ಸಿ ಬುಧವಾರ ಹೇಳಿದೆ.

ಗಾಝಾ ನಗರದ ಹೊರವಲಯದಲ್ಲಿರುವ ಅಲ್-ತುಫಾ ಪ್ರದೇಶದಲ್ಲಿರುವ ಯಫಾ ಶಾಲೆಯ ಕಟ್ಟಡವನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಮಹಿಳೆಯರು, ಮಕ್ಕಳ ಸಹಿತ 11 ಮಂದಿ ಸಾವನ್ನಪ್ಪಿದ್ದಾರೆ. ಶಾಲೆಯಲ್ಲಿ ನಿರಾಶ್ರಿತರು ಆಶ್ರಯ ಪಡೆದಿದ್ದರು. ಬಾಂಬ್ ದಾಳಿಯಿಂದಾಗಿ ಶಾಲೆಯ ಕಟ್ಟಡದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಿಯಂತ್ರಿಸಿದ ಬಳಿಕ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದ ಮೃತದೇಹಗಳು ಪತ್ತೆಯಾಗಿವೆ ಎಂದು ಹಮಾಸ್ ಮಿಲಿಟರಿ ವಕ್ತಾರರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಜಬಾಲಿಯಾ ಪ್ರದೇಶದಲ್ಲಿ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಮಗು ಮೃತಪಟ್ಟಿದ್ದರೆ, ಖಾನ್ ಯೂನಿಸ್ ನಗರದಲ್ಲಿನ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗಾಝಾ ನಗರದ ಪೂರ್ವ ಭಾಗದಲ್ಲಿ ನಡೆದ ದಾಳಿಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

2023ರ ಅಕ್ಟೋಬರ್ 7ರಂದು ಗಾಝಾದಲ್ಲಿ ಯುದ್ಧ ಆರಂಭಗೊಂಡಂದಿಂನಿಂದ ಇಸ್ರೇಲ್ ನಡೆಸುತ್ತಿರುವ ದಾಳಿಯಿಂದಾಗಿ ಸಾವಿರಾರು ಗಾಝಾ ನಿವಾಸಿಗಳು ತಮ್ಮ ಮನೆಯನ್ನು ತೊರೆದು ಶಾಲೆಗಳಲ್ಲಿ ಆಶ್ರಯ ಪಡೆದಿರುವುದಾಗಿ ನೆರವು ಏಜೆನ್ಸಿಗಳು ಅಂದಾಜಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News