ಗಾಝಾ: ಇಸ್ರೇಲ್ ದಾಳಿಯಲ್ಲಿ ಹಮಾಸ್ ಮುಖಂಡ ಸಹಿತ 71 ಮಂದಿ ಮೃತ್ಯು; ವರದಿ

Update: 2024-07-13 16:49 GMT

PC : PTI 

 ಗಾಝಾ: ಗಾಝಾ ಪಟ್ಟಿಯ ದಕ್ಷಿಣದ ಖಾನ್ ಯೂನಿಸ್ ನಗರದ ಮೇಲೆ ಶನಿವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಮಾಸ್‍ನ ಸಶಸ್ತ್ರ ವಿಭಾಗದ ಮುಖ್ಯಸ್ಥ ಮುಹಮ್ಮದ್ ದೆಯಿಫ್ ಸೇರಿದಂತೆ 71 ಮಂದಿ ಸಾವನ್ನಪ್ಪಿದ್ದು 290ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಹೇಳಿದೆ.

ಹಮಾಸ್‍ನ ಮಿಲಿಟರಿ ವಿಭಾಗದ ಮುಖ್ಯಸ್ಥರನ್ನು ಗುರಿಯಾಗಿಸಿ ದಾಳಿ ನಡೆದಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. ಮುಹಮ್ಮದ್ ದೆಯಿಫ್ ಹಲವು ವರ್ಷದಿಂದ ಇಸ್ರೇಲ್‍ನ `ಮೋಸ್ಟ್ ವಾಂಟೆಡ್' ಪಟ್ಟಿಯಲ್ಲಿದ್ದು ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಯೋಜನೆ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದಾಗಿ ಇಸ್ರೇಲ್ ಹೇಳಿದೆ. ಕನಿಷ್ಟ 289 ಗಾಯಾಳುಗಳನ್ನು ನಾಸೆರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಝಾ ಆರೋಗ್ಯ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News