ಗಾಝಾ: ಶಾಲೆಯ ಮೇಲೆ ಇಸ್ರೇಲ್ ದಾಳಿಯಲ್ಲಿ ಕನಿಷ್ಟ 12 ಮಂದಿ ಸಾವು
Update: 2024-08-20 16:39 GMT
ಗಾಝಾ: ಸ್ಥಳಾಂತರಗೊಂಡವರು ಆಶ್ರಯ ಪಡೆದಿದ್ದ ಶಾಲೆಯೊಂದರ ಮೇಲೆ ಮಂಗಳವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಟ 12 ಮಂದಿ ಸಾವನ್ನಪ್ಪಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ಹೇಳಿದೆ.
ಗಾಝಾ ನಗರದ ಪಶ್ಚಿಮದಲ್ಲಿರುವ ಮುಸ್ತಫಾ ಹಫೀಝ್ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ಬಾಂಬ್‍ದಾಳಿಯಲ್ಲಿ 12 ಫೆಲಸ್ತೀನೀಯರು ಮೃತಪಟ್ಟಿದ್ದಾರೆ. ಸ್ಥಳಾಂತರಗೊಂಡ ಸಾವಿರಾರು ಫೆಲೆಸ್ತೀನೀಯರು ಶಾಲೆಯಲ್ಲಿ ಆಶ್ರಯ ಪಡೆದಿದ್ದರು . ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರರನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ. ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. ಬಾಂಬ್ ದಾಳಿಯಲ್ಲಿ ಶಾಲೆಯ ಒಂದು ಭಾಗ ಕುಸಿದು ಬಿದ್ದಾಗ ಶಾಲೆಯಲ್ಲಿ ಆಶ್ರಯ ಪಡೆದಿದ್ದ ಮಕ್ಕಳು, ಮಹಿಳೆಯರ ಸಹಿತ ನೂರಾರು ಫೆಲೆಸ್ತೀನೀಯರು ಆತಂಕದಿಂದ ಓಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.