ಗಾಝಾ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 13 ಫೆಲಸ್ತೀನೀಯರ ಮೃತ್ಯು

Update: 2024-09-02 14:41 GMT

ಸಾಂದರ್ಭಿಕ ಚಿತ್ರ (PTI)

ಗಾಝಾ, ಸೆ.2: ಗಾಝಾ ಪಟ್ಟಿಯಾದ್ಯಂತ ಕಳೆದ 24 ಗಂಟೆಯಲ್ಲಿ ಇಸ್ರೇಲ್ ಪಡೆಗಳ ದಾಳಿಯಲ್ಲಿ ಕನಿಷ್ಠ 13 ಫೆಲಸ್ತೀನೀಯರು ಸಾವನ್ನಪ್ಪಿರುವುದಾಗಿ ಫೆಲಸ್ತೀನ್ ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಗಾಝಾ ಪಟ್ಟಣದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 7 ಫೆಲೆಸ್ತೀನೀಯರು, ಬುರೇಜಿ ಮತ್ತು ನುಸೀರಾತ್ ನಿರಾಶ್ರಿತರ ಶಿಬಿರದ ಮೇಲೆ ನಡೆದ ಎರಡು ವಾಯು ದಾಳಿಯಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಈ ಮಧ್ಯೆ, ಗಾಝಾ ಪ್ರದೇಶದಲ್ಲಿ ವಿಶ್ವಸಂಸ್ಥೆಯ ನೇತೃತ್ವದಲ್ಲಿ ನಡೆಯುತ್ತಿರುವ ಪೋಲಿಯೊ ಲಸಿಕೆ ಅಭಿಯಾನದ ಮೊದಲ ದಿನವಾದ ರವಿವಾರ 87,000ಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ಹಾಕಲಾಗಿದೆ ಎಂದು ವಿಶ್ವಸಂಸ್ಥೆ ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News