ಗಾಝಾ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 22 ಮಂದಿ ಮೃತ್ಯು

Update: 2024-09-21 16:54 GMT

ಸಾಂದರ್ಭಿಕ ಚಿತ್ರ | PTI

ಗಾಝಾ : ದಕ್ಷಿಣ ಗಾಝಾ ನಗರದಲ್ಲಿ ಸ್ಥಳಾಂತರಿತ ಜನರು ಆಶ್ರಯ ಪಡೆದಿದ್ದ ಶಾಲೆಯೊಂದರ ಮೇಲೆ ಶನಿವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸಹಿತ ಕನಿಷ್ಠ 22 ಮಂದಿ ಮೃತಪಟ್ಟಿರುವುದಾಗಿ ಗಾಝಾ ಆರೋಗ್ಯ ಇಲಾಖೆ ಹೇಳಿದೆ.

3 ತಿಂಗಳ ಮಗುವಿನ ಸಹಿತ 13 ಮಕ್ಕಳು ಮತ್ತು 6 ಮಹಿಳೆಯರು ಮೃತಪಟ್ಟವರಲ್ಲಿ ಸೇರಿದ್ದಾರೆ. ರಫಾದಲ್ಲಿ ಸೇನೆ ನಡೆದ ಮತ್ತೊಂದು ವೈಮಾನಿಕ ದಾಳಿಯಲ್ಲಿ 4 ಆರೋಗ್ಯ ಕಾರ್ಯಕರ್ತರು ಹತರಾಗಿದ್ದಾರೆ ಎಂದು ಹಮಾಸ್ ಆರೋಗ್ಯ ಇಲಾಖೆ ಹೇಳಿದೆ.

ಶಾಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಹಮಾಸ್ ಕಮಾಂಡ್ ಕೇಂದ್ರವನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News