ಗಾಝಾ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 30 ಮಂದಿ ಮೃತ್ಯು

Update: 2024-07-11 17:38 GMT

ಸಾಂದರ್ಭಿಕ ಚಿತ್ರ | PTI

ಗಾಝಾ : ಗುರುವಾರ ಗಾಝಾ ನಗರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದ ಹಲವು ಮನೆಗಳು ಮತ್ತು ಕಟ್ಟಡಗಳು ನೆಲಸಮಗೊಂಡಿದ್ದು ಕಟ್ಟಡದ ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಗಾಝಾದ ಆರೋಗ್ಯ ಇಲಾಖೆ ಹೇಳಿದೆ.

ಗಾಝಾ ನಗರದ ಟೆಲ್ ಅಲ್-ಹವಾ ಮತ್ತು ಸಬ್ರಾ ಜಿಲ್ಲೆಗಳಲ್ಲಿ ಇಸ್ರೇಲ್ ಸೇನೆಯ ದಾಳಿಯಲ್ಲಿ ಕುಸಿದು ಬಿದ್ದಿರುವ ಮನೆಗಳಡಿ ಹಲವರು ಸಿಕ್ಕಿಬಿದ್ದಿದ್ದು ವ್ಯಾಪಕ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಯುತ್ತಿರುವುದರಿಂದ ಈ ಪ್ರದೇಶವನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಟೆಲ್ ಅಲ್-ಹವಾ ಮತ್ತು ರಿಮಾಲ್ ಪ್ರದೇಶಗಳಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈಜಿಪ್ಟ್ ಗಡಿಭಾಗದ ಬಳಿಯ ರಫಾ ನಗರದಲ್ಲಿ ಇಸ್ರೇಲ್ ಸೇನೆ ಹಲವು ಮನೆಗಳನ್ನು ಸ್ಫೋಟಿಸಿದೆ. ಪಶ್ಚಿಮ ರಫಾದಲ್ಲಿನ ಟೆಲ್ ಅಲ್-ಸುಲ್ತಾನ್ ಪ್ರದೇಶದಲ್ಲಿ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಒಂದು ಮಗು ಸೇರಿದಂತೆ 4 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News