ಗಾಝಾ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 7 ಮಂದಿ ಮೃತ್ಯು

Update: 2024-12-29 16:48 GMT

ಸಾಂದರ್ಭಿಕ ಚಿತ್ರ | PC : PTI/AP

ಗಾಝಾ : ಗಾಝಾದ ಆಸ್ಪತ್ರೆಯ ಮೇಲೆ ರವಿವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಏಜೆನ್ಸಿ ಹೇಳಿದೆ.

ಮಧ್ಯ ಗಾಝಾದ ಅಲ್-ವಫಾ ಆಸ್ಪತ್ರೆಯ ಮೇಲಿನ ಮಹಡಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಟ 7 ಮಂದಿ ಮೃತಪಟ್ಟಿದ್ದು ಹಲವರು ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಕಾರ್ಯ ನಿರ್ವಹಣೆ ಸ್ಥಗಿತಗೊಳಿಸಿದ್ದ ಅಲ್-ವಫಾ ಆಸ್ಪತ್ರೆಯಲ್ಲಿ ಹಮಾಸ್ ಸಶಸ್ತ್ರ ಹೋರಾಟಗಾರರ ಗುಂಪಿನ ನೆಲೆಯನ್ನು ಗುರಿಯಾಗಿಸಿ ದಾಳಿ ನಡೆದಿರುವುದಾಗಿ ಇಸ್ರೇಲ್ ಹೇಳಿದೆ. ಇದನ್ನು ಗಾಝಾದ ಆರೋಗ್ಯ ಇಲಾಖೆ ನಿರಾಕರಿಸಿದ್ದು, ಆಸ್ಪತ್ರೆಯಲ್ಲಿ ಅಂಗವಿಕಲ ವ್ಯಕ್ತಿಗಳಿಗೆ ಆರೈಕೆ ಒದಗಿಸಲಾಗುತ್ತಿತ್ತು ಎಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News