ಗ್ರೀಸ್ | ವಲಸಿಗರ ದೋಣಿ ಮುಳುಗಿ ಓರ್ವ ಮೃತ್ಯು ; 40 ಮಂದಿ ನಾಪತ್ತೆ
Update: 2024-12-14 16:21 GMT
ಅಥೆನ್ಸ್: ಗ್ರೀಸ್‍ನ ಕ್ರೀಟ್ ದ್ವೀಪದ ಬಳಿ ಶನಿವಾರ ವಲಸಿಗರ ದೋಣಿ ಮುಳುಗಿದ್ದು ಓರ್ವ ಸಾವನ್ನಪ್ಪಿದ್ದಾನೆ. 39 ಮಂದಿಯನ್ನು ರಕ್ಷಿಸಲಾಗಿದ್ದು 40 ಮಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ದ್ವೀಪದ ನೈಋತ್ಯಕ್ಕೆ 12 ನಾಟಿಕಲ್ ಮೈಲು ದೂರದಲ್ಲಿ ಶುಕ್ರವಾರ ಮಧ್ಯರಾತ್ರಿಯ ನಂತರ ದೋಣಿ ಮುಳುಗಿದ್ದು 40 ಮಂದಿ ನಾಪತ್ತೆಯಾಗಿದ್ದಾರೆ. 39 ಮಂದಿಯನ್ನು ರಕ್ಷಿಸಲಾಗಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಲಿಕಾಪ್ಟರ್ ಮೂಲಕ ಸಮೀಪದ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ನಾಪತ್ತೆಯಾದವರ ಶೋಧ ಕಾರ್ಯ ಮುಂದುವರಿದಿದೆ ಎಂದು ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.