ಹಮಾಸ್ ಮುಖ್ಯಸ್ಥ ಯಹ್ಯಾ ಸಿನ್ವರ್ ಮೃತಪಟ್ಟಿರುವ ಸಾಧ್ಯತೆ : ವರದಿ

Update: 2024-09-23 16:42 GMT

 ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವರ್ | PC : PTI

ಗಾಝಾ : ಗಾಝಾದ ಶಾಲೆಯೊಂದನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ಯಹ್ಯಾ ಸಿನ್ವರ್ ಅವರ ಸಂಭಾವ್ಯ ಸಾವಿನ ಬಗ್ಗೆ ಇಸ್ರೇಲ್ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಶಾಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಹಮಾಸ್ ಕಮಾಂಡ್ ಕೇಂದ್ರವನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿದ್ದರೆ ದಾಳಿಯಲ್ಲಿ 22 ಜನರು ಮೃತಪಟ್ಟಿರುವುದಾಗಿ ಫೆಲೆಸ್ತೀನ್ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿನ್ವರ್ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಇಸ್ರೇಲ್‍ನ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು `ಟೈಮ್ಸ್ ಆಫ್ ಇಸ್ರೇಲ್' ವರದಿ ಮಾಡಿದೆ.

ಸಿನ್ವರ್ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಇಸ್ರೇಲ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆದರೆ ಈ ವರದಿಯನ್ನು ಸಮರ್ಥಿಸುವ ಯಾವುದೇ ಪುರಾವೆಗಳಿಲ್ಲ. ಈ ಹಿಂದೆಯೂ ಸಿನ್ವರ್ ಇದ್ದಕ್ಕಿದ್ದಂತೆ ನಾಪತ್ತೆಯಾಗುತ್ತಿದ್ದರು. ಅವರು ಹತರಾಗಿದ್ದಾರೆ ಎಂದು ಭಾವಿಸಿದ್ದರೆ ಕೆಲ ದಿನಗಳ ಬಳಿಕ ಮತ್ತೆ ಕಾಣಿಸಿಕೊಳ್ಳುತ್ತಿದ್ದರು' ಎಂದು ಪತ್ರಕರ್ತ ಬೆನ್ ಕ್ಯಾಸ್ಪಿಟ್ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News