ಮೆಕ್ಸಿಕೋದಲ್ಲಿ ಚಂಡಮಾರುತ: ಕನಿಷ್ಟ 4 ಮಂದಿ ಸಾವು

Update: 2024-06-22 17:26 GMT

 ಸಾಂದರ್ಭಿಕ ಚಿತ್ರ | PC : DDnews

ಮೆಕ್ಸಿಕೋ ಸಿಟಿ: ಮೆಕ್ಸಿಕೋದ ಈಶಾನ್ಯ ಕರಾವಳಿಗೆ ಅಪ್ಪಳಿಸಿರುವ ಚಂಡಮಾರುತದಿಂದ ಭಾರೀ ಮಳೆ ಹಾಗೂ ಪ್ರವಾಹಕ್ಕೆ ಸಿಲುಕಿ ಕನಿಷ್ಟ 4 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮೆಕ್ಸಿಕೋದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ನ್ಯುವಿಯೊ ಲಿಯೊನ್ ನಗರದಲ್ಲಿ ವಿದ್ಯುತ್ ಶಾಕ್‍ನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಮತ್ತೊಬ್ಬ ಯುವಕ ನೀರಿನಲ್ಲಿ ಕೊಚ್ಚಿಹೋಗಿದ್ದರೆ, ವಿದ್ಯುತ್ ತಂತಿ ಬಿದ್ದಿದ್ದ ಕೆರೆಯ ನೀರಿಗೆ ಇಳಿದ ಇಬ್ಬರು ಬಾಲಕರು ವಿದ್ಯುತ್ ಶಾಕ್‍ನಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News