ಅಮೆರಿಕದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿ ನಿಗೂಢ ಸಾವು

Update: 2024-09-21 09:25 GMT

Photo credit: X

ವಾಷಿಂಗ್ಟನ್: ವಾಷಿಂಗ್ಟನ್ ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಯ ಆವರಣದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ರಾಜತಾಂತ್ರಿಕ ಕಚೇರಿಯ ಪ್ರಕಾರ, ಈ ಘಟನೆ ಬುಧವಾರ ನಡೆದಿದ್ದು, ಸ್ಥಳೀಯ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.

ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ ಎಂದೂ ಭಾರತೀಯ ರಾಜತಾಂತ್ರಿಕ ಕಚೇರಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತ ಕುಟುಂಬದ ಖಾಸಗಿತನವನ್ನು ರಕ್ಷಿಸಲು ಹೆಚ್ಚುವರಿ ಮಾಹಿತಿಗಳನ್ನು ಬಿಡುಗಡೆ ಮಾಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News