ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಹಣದುಬ್ಬರ ಇಳಿಕೆ
Update: 2023-07-31 17:59 GMT
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ 2 ವರ್ಷಗಳಲ್ಲಿ ಇದೇ ಪ್ರಥಮ ಬಾರಿಗೆ ಏಕ-ಅಂಕಿಯ ಹಣದುಬ್ಬರ ದಾಖಲಾಗಿದೆ ಎಂದು ಸರಕಾರ ಮಾಹಿತಿ ನೀಡಿದೆ.
ಆರ್ಥಿಕ ಬಿಕ್ಕಟ್ಟಿನ ನಡುವೆಯೂ ದೇಶದಲ್ಲಿನ ಹಣದುಬ್ಬರದ ಪ್ರಮಾಣ ಜುಲೈ ಅಂತ್ಯಕ್ಕೆ 6.3%ಕ್ಕೆ ಇಳಿದಿದೆ. ಕಳೆದ ವರ್ಷದ ಜೂನ್ ಅವಧಿಯಲ್ಲಿ ಹಣದುಬ್ಬರ ಪ್ರಮಾಣ 12% ಆಗಿತ್ತು. ಆಹಾರ ಸರಕುಗಳ ಬೆಲೆಯಲ್ಲಿನ ಇಳಿಕೆಯು ಕಡಿಮೆ ಹಣದುಬ್ಬರಕ್ಕೆ ಕಾರಣವಾಗಿದೆ. ಕಳೆದ 12 ತಿಂಗಳುಗಳಲ್ಲಿ ಆಹಾರದ ಬೆಲೆಗಳಲ್ಲಿ 1.4%ದಷ್ಟು ಇಳಿಕೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.