ಮಸ್ಕ್ ಜತೆ ಇರಾನ್ ರಾಯಭಾರಿಯ ಸಭೆ ವರದಿ ನಿರಾಕರಿಸಿದ ಇರಾನ್

Update: 2024-11-16 16:43 GMT

ಎಲಾನ್ ಮಸ್ಕ್  | PC  : PTI

ಟೆಹ್ರಾನ್: ಅಮೆರಿಕದ ಉದ್ಯಮಿ, ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಎಲಾನ್ ಮಸ್ಕ್ ರನ್ನು ಇರಾನ್ ರಾಯಭಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂಬ `ನ್ಯೂಯಾರ್ಕ್ ಟೈಮ್ಸ್' ವರದಿಯನ್ನು ಇರಾನ್ ಶನಿವಾರ ಸ್ಪಷ್ಟವಾಗಿ ನಿರಾಕರಿಸಿದೆ.

ವಿಶ್ವಸಂಸ್ಥೆಗೆ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾವಾನಿ ಈ ವಾರದ ಆರಂಭದಲ್ಲಿ ನ್ಯೂಯಾರ್ಕ್‍ನಲ್ಲಿ ಮಸ್ಕ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿತ್ತು. ಈ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ, ಅಮೆರಿಕದ ಮಾಧ್ಯಮಗಳ ವರದಿಯಿಂದ ಅಚ್ಚರಿಯಾಗಿದೆ. ಇಂತಹ ಯಾವುದೇ ಭೇಟಿ ನಡೆದಿಲ್ಲ' ಎಂದು ಸ್ಪಷ್ಟಪಡಿಸಿರುವುದಾಗಿ ಇರಾನ್‍ನ ಸರಕಾರಿ ಸ್ವಾಮ್ಯದ `ಇರ್ನಾ' ಸುದ್ದಿಸಂಸ್ಥೆ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News