ಸಾವಿರಾರು ಜನರು ಆಶ್ರಯ ಪಡೆದಿದ್ದ ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ, ಕನಿಷ್ಠ 500 ಸಾವು

Update: 2023-10-17 19:38 GMT

Photo:aljazeera.com

ಗಾಝಾ ಸಿಟಿ : ಗಾಝಾ ನಗರದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ಮಾಡಿದೆ ಎಂದು Aljazeera.com ವರದಿ ಮಾಡಿದೆ.

ಆಸ್ಪತ್ರೆಯಲ್ಲಿ ಸಾವಿರಾರು ನಾಗರಿಕರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು. ನಿರಂತರ ದಾಳಿಯ ಪರಿಣಾಮ ನಿರಾಶ್ರಿತರೂ ಆಸ್ಪತ್ರೆಯಲ್ಲಿ ಆಶ್ರಯ ಪಡೆಯುತ್ತಿದ್ದರು ಎನ್ನಲಾಗಿದೆ.

ಬಾಂಬ್ ದಾಳಿಯಿಂದಾಗಿ ಕನಿಷ್ಠ 500 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವ ಸಂಸ್ಥೆ ನಡೆಸುತ್ತಿದ್ದ ಶಾಲೆಯಲ್ಲಿ ಆಶ್ರಯ ಪಡೆದಿದ್ದ ನಿರಾಶ್ರಿತರ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.



Photo:aljazeera.com


Photo:aljazeera.com


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News