ಗಾಝಾದ ಮೇಲೆ ಇಸ್ರೇಲ್ ವಾಯುದಾಳಿ : 11 ಫೆಲೆಸ್ತೀನೀಯರ ಮೃತ್ಯು

Update: 2024-08-26 16:21 GMT

  ಸಾಂದರ್ಭಿಕ ಚಿತ್ರ

ಗಾಝಾ : ಗಾಝಾ ನಗರದ ಮೇಲೆ ಸೋಮವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ಎರಡು ಪ್ರತ್ಯೇಕ ವೈಮಾನಿಕ ದಾಳಿಯಲ್ಲಿ ಕನಿಷ್ಠ 11 ಮಂದಿ ಫೆಲಸ್ತೀನೀಯರು ಮೃತಪಟ್ಟಿದ್ದು ಹಲವರು ಗಾಯಗೊಂಡಿರುವುದಾಗಿ ಫೆಲೆಸ್ತೀನ್ನಲ ವಫಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಆಸ್ಪತ್ರೆಯ ಬಳಿಯ ಮನೆಯೊಂದನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ 5 ಫೆಲೆಸ್ತೀನೀಯರು ಮೃತಪಟ್ಟಿದ್ದಾರೆ. ಮತ್ತೊಂದು ಘಟನೆಯಲ್ಲಿ, ಗಾಝಾ ನಗರದ ಬೀಚ್ ಬಳಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 6 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಅಧಿಕಾರಿಗಳನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News