ಇಟಲಿ | ಖಾಲಿಸ್ತಾನಿ ತೀವ್ರವಾದಿಗಳಿಂದ ಮಹಾತ್ಮಾ ಗಾಂಧೀಜಿ ಪ್ರತಿಮೆಗೆ ಹಾನಿ

Update: 2024-06-12 17:29 GMT

PC : NDTV

ರೋಮ್: ಇಟಲಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಖಾಲಿಸ್ತಾನ್ ತೀವ್ರವಾದಿಗಳು ಹಾನಿ ಎಸಗಿ ಅದರ ಪೀಠದಲ್ಲಿ ಖಾಲಿಸ್ತಾನ್ ಪ್ರತ್ಯೇಕತಾವಾದಿ ಮುಖಂಡ ಹರ್ದೀಪ್ ಸಿಂಗ್ ನಿಜ್ಜಾರ್ಗೆ ಸಂಬಂಧಿಸಿದ ವಿವಾದಾತ್ಮಕ ಘೋಷಣೆ ಬರೆದಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಇಟಲಿಯ ಬ್ರಿಂಡಿಸಿ ನಗರದಲ್ಲಿರುವ ಈ ಪ್ರತಿಮೆಯನ್ನು ಭಾರತದ ಪ್ರಧಾನಿಯ ಇಟಲಿ ಪ್ರವಾಸದ ಸಂದರ್ಭ ಅನಾವರಣಗೊಳಿಸಲು ಉದ್ದೇಶಿಸಲಾಗಿತ್ತು. ಜೂನ್ 13ರಿಂದ 15ರವರೆಗೆ ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಇಟಲಿಗೆ ಭಾರತದ ರಾಯಭಾರಿ ವಾಣಿ ರಾವ್ ` ಗಾಂಧೀಜಿ ಪ್ರತಿಮೆಯ ಪೀಠವನ್ನು ಸ್ವಚ್ಛಗೊಳಿಸಲು ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಲಾಗಿದೆ' ಎಂದಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News