ರಾಜೀನಾಮೆ ಘೋಷಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ
Update: 2025-01-06 16:35 GMT
ಒಟ್ಟಾವಾ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕನ ಸ್ಥಾನಕ್ಕೆ ಮತ್ತು ಕೆನಡಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
"ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕನ ಸ್ಥಾನಕ್ಕೆ ಮತ್ತು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ" ಎಂದು ಜಸ್ಟಿನ್ ಟ್ರುಡೊ ಒಟ್ಟಾವಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಜಸ್ಟಿನ್ ಟ್ರುಡೊ ಇತ್ತೀಚೆಗೆ ತನ್ನದೇ ಪಕ್ಷದಲ್ಲಿ ವಿರೋಧವನ್ನು ಎದುರಿಸಿದ್ದರು. ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ಅವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ.