ಕಾಬೂಲ್: ಬಸ್ಸಿನಲ್ಲಿ ಸ್ಫೋಟ 7 ಮಂದಿ ಮೃತ್ಯು

Update: 2023-11-08 15:17 GMT

ಸಾಂದರ್ಭಿಕ ಚಿತ್ರ Photo: NDTV 

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯ ಬಳಿ ಬಸ್ಸಿನಲ್ಲಿ ಬಾಂಬ್ ಸ್ಫೋಟಗೊಂಡು 7 ಪ್ರಯಾಣಿಕರು ಮೃತಪಟ್ಟಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಕಾಬೂಲ್‍ನ ಸಮೀಪದ ದಷ್ತೆ ಬರ್ಚಿ ನಗರದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್‍ನಲ್ಲಿ ಸ್ಫೋಟ ಸಂಭವಿಸಿದೆ. 7 ಮಂದಿ ಮೃತಪಟ್ಟಿದ್ದು ಇತರ 20 ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಸಿಬಂದಿ ಸ್ಥಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದ್ದಾರೆ. ಯಾವುದೇ ಸಂಘಟನೆ ಸ್ಫೋಟದ ಹೊಣೆ ವಹಿಸಿಕೊಂಡಿಲ್ಲ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಝರ್ದಾನ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News