ಕಝಕಿಸ್ತಾನ | ವಿಮಾನ ಪತನದಲ್ಲಿ 42 ಮಂದಿ ಮೃತ್ಯು : ವರದಿ
ಕಝಕಿಸ್ತಾನ: ಅಕ್ಟೌ ನಗರದ ಬಳಿ ತುರ್ತು ಭೂಸ್ಪರ್ಶ ಮಾಡುವಾಗ 67 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನಗೊಂಡು ಕನಿಷ್ಠ 42 ಜನರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಕಝಕಿಸ್ತಾನದ ಅಧಿಕಾರಿಗಳು ತಿಳಿಸಿರುವ ಬಗ್ಗೆ ವರದಿಯಾಗಿದೆ.
ʼಅಝರ್ ಬೈಜಾನ್ ಏರ್ ಲೈನ್ಸ್ʼ ವಿಮಾನ J2-8243 ಬಾಕುವಿನಿಂದ ರಷ್ಯಾದ ಗ್ರೋಜ್ನಿಗೆ ತೆರಳುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಮಾರ್ಗವನ್ನು ಬದಲಾಯಿಸಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ವಿಮಾನ ಅಪಘಾತದಲ್ಲಿ 42 ಜನರು ಮೃತಪಟ್ಟಿದ್ದಾರೆ ಎಂದು ಕಝಕಿಸ್ತಾನದ ಸಚಿವಾಲಯ ತಿಳಿಸಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.
ಆರಂಭಿಕ ವರದಿಗಳ ಪ್ರಕಾರ, ವಿಮಾನವು ಮೊದಲು ಪಕ್ಷಿಗಳಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಪೈಲಟ್ಗಳು ವಿಮಾನವನ್ನು ನಿಯಂತ್ರಣಕ್ಕೆ ತರಳು ಪ್ರಯತ್ನಿಸಿದ್ದಾರೆ ಆದರೆ ವಿಫಲರಾಗಿದ್ದಾರೆ. ಅಕ್ಟೌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು ಮೂರು ಕಿ.ಮೀ. ದೂರದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
Azerbaijan Airlines passenger plane flying from Baku to Grozny crashed in Aktau, Kazakhstan. pic.twitter.com/EnicqHcTGM
— Clash Report (@clashreport) December 25, 2024