ಲೆಬನಾನ್ | ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ಲಾ ಸದಸ್ಯ ಮೃತ್ಯು
Update: 2024-12-07 15:42 GMT
ಟೆಲ್‍ಅವೀವ್ : ದಕ್ಷಿಣ ಲೆಬನಾನ್‍ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಸಶಸ್ತ್ರ ಹೋರಾಟಗಾರರ ಗುಂಪಿನ ಸದಸ್ಯನನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಸೇನೆ ಶನಿವಾರ ಹೇಳಿದೆ.
ದಕ್ಷಿಣ ಲೆಬನಾನ್‍ನಲ್ಲಿರುವ ಇಸ್ರೇಲ್ ಪಡೆಗೆ ಬೆದರಿಕೆ ಒಡ್ಡಿದ ಬೈಕ್ ಸವಾರನನ್ನು ಗುರಿಯಾಗಿಸಿ ವೈಮಾನಿಕ ದಾಳಿ ನಡೆಸಲಾಗಿದೆ. ಕದನ ವಿರಾಮ ಒಪ್ಪಂದದ ವ್ಯಾಪ್ತಿಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಸ್ರೇಲ್ ಪ್ರತಿಪಾದಿಸಿದೆ.