ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಆರಂಭಿಕ ಮುನ್ನಡೆ ಸಾಧಿಸಿದ ಮಾರ್ಕ್ಸ್ ವಾದಿ ನಾಯಕ ದಿಸ್ಸಾನಾಯಕೆ

Update: 2024-09-22 06:01 GMT

Photo credit: X/@anuradisanayake

ಶ್ರೀಲಂಕಾ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾರ್ಕ್ಸ್ ವಾದಿ ನಾಯಕ ಅನುರಾ ಕುಮಾರ ದಿಸ್ಸಾನಾಯಕೆ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಆರ್ಥಿಕ ಬಿಕ್ಕಟ್ಟಿನ ಬಳಿಕ ನಿನ್ನೆ ಶ್ರೀಲಂಕದಲ್ಲಿ ಅಧ್ಯಕ್ಷೀಯ ಚುನಾವಣೆಗೆ ಮತದಾನ ನಡೆದಿತ್ತು. ಇದುವರೆಗೆ ಎಣಿಕೆಯಾದ ಮಿಲಿಯನ್ ಮತಗಳಲ್ಲಿ 53% ದಷ್ಟು ಮತಗಳನ್ನು ಪಡೆಯುವ ಮೂಲಕ ಅನುರಾ ಕುಮಾರ ದಿಸ್ಸಾನಾಯಕೆ ಮುನ್ನಡೆ ಸಾಧಿಸಿದ್ದಾರೆ ಎಂದು ಶ್ರೀಲಂಕಾದ ಚುನಾವಣಾ ಆಯೋಗದ ಅಂಕಿ-ಅಂಶಗಳು ತೋರಿಸಿವೆ.

ಶ್ರೀಲಂಕಾದ ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ 22% ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಶ್ರೀಲಂಕದ ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಶ್ರೀಲಂಕದ 75% ದಷ್ಟು ಜನರು ಶನಿವಾರದ ಚುನಾವಣೆಯಲ್ಲಿ ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.

ಮಾರ್ಕ್ಸ್ ವಾದಿ ಒಲವಿನ ಜನತಾ ವಿಮುಕ್ತಿ ಪೆರೆಮುನ (JVP) ಪಕ್ಷದ ದಿಸಾನಾಯಕೆ ಅವರು ರಾಷ್ಟ್ರೀಯ ಜನತಾ ಶಕ್ತಿ (NPP) ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News