ನೂತನ ಬ್ರಿಟನ್ ಪ್ರಧಾನಿಗೆ ಮೋದಿ ಕರೆ, ಭಾರತಕ್ಕೆ ಆಹ್ವಾನ

Update: 2024-07-06 17:17 GMT

PC : twitter (ಪ್ರಧಾನಿ ನರೇಂದ್ರ ಮೋದಿ ,  ಕೀರ್‌ ಸ್ಟಾರ್ಮರ್‌)

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಬ್ರಿಟನ್ ನ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು. ಈ ವೇಳೆ ಭಾರತ ಮತ್ತು ಬ್ರಿಟನ್ ನಡುವಿನ ಸಮಗ್ರ ವ್ಯೆಹಾತ್ಮಕ ಪಾಲುದಾರಿಕೆ ಹಾಗೂ ಆರ್ಥಿಕ ಸಂಬಂಧಗಳನ್ನು ಸದೃಢಗೊಳಿಸಲು ತಮ್ಮ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.

ಬ್ರಿಟನ್ ಸಾರ್ವತ್ರಿಕ ಚುನಾವಣೆಗಳಲ್ಲಿ ಲೇಬರ್ ಪಾರ್ಟಿಯ ಭಾರೀ ವಿಜಯಕ್ಕಾಗಿ ಸ್ಟಾರ್ಮರ್ ಅವರನ್ನು ಅಭಿನಂದಿಸಿದ ಮೋದಿ, ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದರು.

ಪರಸ್ಪರ ಲಾಭದಾಯಕ ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದವನ್ನು ಶೀಘ್ರ ಅಂತಿಮಗೊಳಿಸುವ ನಿಟ್ಟಿನಲ್ಲಿ ಶ್ರಮಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು ಎಂದು ಪ್ರಧಾನಿ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದೆ.

ಉಭಯ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಮೆಲುಕು ಹಾಕಿದ ನಾಯಕರು ಬ್ರಿಟನ್ನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಧನಾತ್ಮಕ ಕೊಡುಗೆಗಳನ್ನು ಪ್ರಶಂಸಿಸಿದರು ಮತ್ತು ಉಭಯ ದೇಶಗಳ ಜನರ ನಡುವೆ ನಿಕಟ ಸಂಬಂಧಕ್ಕೆ ಉತ್ತೇಜನವನ್ನು ಮುಂದುವರಿಸಲು ಒಪ್ಪಿಕೊಂಡರು ಎಂದೂ ಹೇಳಿಕೆಯು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News