ಪ್ರತಿಭಟನೆಗಳ ನಡುವೆ ಬಾಂಗ್ಲಾದಲ್ಲಿ ದೇವಳಗಳ ರಕ್ಷಣೆಗೆ ನಿಂತ ಮುಸ್ಲಿಂ ವಿದ್ಯಾರ್ಥಿಗಳು; ವಿಡಿಯೋ ವೈರಲ್

Update: 2024-08-06 11:24 GMT

Image Credit: X/@JusticeBengal

ಢಾಕಾ: ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ದೇಶ ಬಿಟ್ಟು ಪರಾರಿಯಾದ ನಂತರ ರಾಜಕೀಯ ಅಸ್ಥಿರತೆಯನ್ನು ಎದುರಿಸುತ್ತಿರುವ ಬಾಂಗ್ಲಾದೇಶದಲ್ಲಿ ಪ್ರತಿಭಟನಾನಿರತ ಮುಸ್ಲಿಂ ವಿದ್ಯಾರ್ಥಿಗಳು ಢಾಕಾದ ಢಾಕೇಶ್ವರಿ ದೇವಸ್ಥಾನಕ್ಕೆ ಕಾವಲು ನಿಂತು ಧಾರ್ಮಿಕ ಸೌಹಾರ್ದತೆ ಮೆರೆದಿದ್ದಾರೆ. ದೇವಸ್ಥಾನ ಸುರಕ್ಷಿತವಾಗಿರುವಂತೆ ಈ ವಿದ್ಯಾರ್ಥಿಗಳು ನೋಡಿಕೊಳ್ಳುತ್ತಿದ್ದಾರೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಲವಾರು ಚಿತ್ರಗಳಲ್ಲಿ ಮದರಸಾ ವಿದ್ಯಾರ್ಥಿಗಳು ಸೇರಿದಂತೆ ಮುಸ್ಲಿಂ ವಿದ್ಯಾರ್ಥಿಗಳು ದೇಶದಾದ್ಯಂತ ಇರುವ ದೇವಸ್ಥಾನಗಳಿಗೆ ರಕ್ಷಣೆ ಒದಗಿಸುತ್ತಿರುವುದು ಕಾಣಿಸುತ್ತದೆ. #HindusAreSafeInBangladesh ಎಂಬ ಹ್ಯಾಶ್‌ಟ್ಯಾಗ್‌ ಕೂಡ ಸಾಕಷ್ಟು ಸುದ್ದಿಯಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯಗಳ ಮೇಲೆ ದಾಳಿ ನಡೆಯುತ್ತಿವೆ ಎಂಬ ಸುದ್ದಿಗಳ ನಡುವೆ ಈ ಹ್ಯಾಶ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ.

ಭಾರತದ ರಿಪಬ್ಲಿಕ್‌ ಮಾಧ್ಯಮವು ಈ ಫೋಟೋಗಳನ್ನು ತಪ್ಪಾಗಿ ವ್ಯಾಖ್ಯಾನಿಸಿ ತಟಸ್ಥ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನಾನಿರತ ಮುಸ್ಲಿಂ ವಿದ್ಯಾರ್ಥಿಗಳಿಂದ ಈ ದೇವಳಗಳನ್ನು ರಕ್ಷಿಸಲು ಕಾವಲು ಕಾಯುತ್ತಿದ್ದಾರೆಂದು ಬಿಂಬಿಸಿದೆ. ಇದು ಬಾಂಗ್ಲಾದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ, ಭಾರತದ ಮುಖ್ಯವಾಹಿನಿ ಮಾಧ್ಯಮಗಳು ತಾರತಮ್ಯಕಾರಿ ವರದಿ ಪ್ರಕಟಿಸಿ ಭಯದ ವಾತಾವರಣ ಮೂಡಿಸಲು ಯತ್ನಿಸುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News