ನೈಜೀರಿಯಾ | ತೈಲ ಟ್ಯಾಂಕರ್ ಸ್ಫೋಟದಿಂದ ಕನಿಷ್ಠ 94 ಮಂದಿ ಮೃತ್ಯು

Update: 2024-10-16 16:01 GMT

PC : AP

ಕನೊ : ಉತ್ತರ ನೈಜೀರಿಯಾದಲ್ಲಿ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟಿಸಿ ಕನಿಷ್ಠ 94 ಮಂದಿ ಸಾವನ್ನಪ್ಪಿದ್ದು, ಇತರ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ಬುಧವಾರ ಹೇಳಿದ್ದಾರೆ.

ಉತ್ತರ ನೈಜೀರಿಯಾದ ಜಿಗಾವ ರಾಜ್ಯದಲ್ಲಿ ಮಂಗಳವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಮಜಿಯಾ ನಗರದಲ್ಲಿ ಟ್ರಕ್ ಒಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ಯಾಂಕರನ್ನು ಚಾಲಕ ರಸ್ತೆಯ ಬದಿಗೆ ತಿರುಗಿಸಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ನಿಂದ ಸೋರಿಕೆಯಾಗುತ್ತಿದ್ದ ತೈಲವನ್ನು ಸಂಗ್ರಹಿಸಲು ಜನ ಗುಂಪುಗೂಡಿದ್ದು ಆಗ ಟ್ಯಾಂಕರ್ ಸ್ಫೋಟಗೊಂಡಿದೆ.

ಸ್ಫೋಟದ ತೀವ್ರತೆಗೆ ಕನಿಷ್ಠ 94 ಮಂದಿ ಸಾವನ್ನಪ್ಪಿದ್ದು ಇತರ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪೊಲೀಸ್ ಇಲಾಖೆಯ ವಕ್ತಾರ ಲವಾನ್ ಶಿಸು ಅಡಮ್‍ರನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ಬುಧವಾರ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News