ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕೃತ

Update: 2024-05-08 17:00 GMT

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 13,578 ಕೋಟಿ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ, ಉದ್ಯಮಿ ನೀರವ್ ಮೋದಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಬ್ರಿಟನ್ ನ್ಯಾಯಾಲಯ ಮತ್ತೆ ತಿರಸ್ಕರಿಸಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗಲು ಅಥವಾ ಸಾಕ್ಷಿಗಳನ್ನು ಒದಗಿಸಲು ವಿಫಲವಾಗುವ ಗಣನೀಯ ಅಪಾಯ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಲು ಸಾಕಷ್ಟು ಆಧಾರಗಳಿವೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News