ಒಮಾನ್‌: ಮಸೀದಿಯಲ್ಲಿ ಗುಂಡಿನ ದಾಳಿ; ನಾಲ್ವರು ಮೃತ್ಯು

Update: 2024-07-16 06:51 GMT

ಸಾಂದರ್ಭಿಕ ಚಿತ್ರ

ಮಸ್ಕತ್: ಒಮಾನ್‌ನ ರಾಜಧಾನಿ ಮಸ್ಕತ್‌ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಘಟನೆಯಲ್ಲಿ  ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

"ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಭದ್ರತಾ ಕ್ರಮಗಳು ಮತ್ತು ಕಾರ್ಯವಿಧಾನಗಳನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ" ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News