ನೊಬೆಲ್ ಶಾಂತಿ ಪ್ರಶಸ್ತಿಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೆಸರು ನಾಮನಿರ್ದೇಶನ

Update: 2025-03-31 20:12 IST
ನೊಬೆಲ್ ಶಾಂತಿ ಪ್ರಶಸ್ತಿಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೆಸರು ನಾಮನಿರ್ದೇಶನ

ಇಮ್ರಾನ್ ಖಾನ್ (Photo: PTI)

  • whatsapp icon

ಇಸ್ಲಾಮಾಬಾದ್ : ಮಾನವ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವ ರಕ್ಷಣೆಗಾಗಿ ಮಾಡಿರುವ ಪ್ರಯತ್ನಗಳನ್ನು ಪರಿಗಣಿಸಿ, ಸದ್ಯ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ನಾರ್ವೆ ರಾಜಕೀಯ ಪಕ್ಷವಾದ ಪಾರ್ಟಿಯೆಟ್ ಸೆಂಟ್ರಮ್ ಗೆ ಸೇರಿರುವ ವಕೀಲಿಕೆ ಗುಂಪಾದ ಪಾಕಿಸ್ತಾನ್ ವರ್ಲ್ಡ್ ಅಲಯನ್ಸ್, 72 ವರ್ಷದ ಇಮ್ರಾನ್ ಖಾನ್ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.

ರವಿವಾರ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪಾರ್ಟಿಯೆಟ್ ಸೆಂಟ್ರಮ್, “ನಾಮನಿರ್ದೇಶನ ಮಾಡುವ ಅಧಿಕಾರ ಹೊಂದಿರುವ ಕೆಲವರೊಂದಿಗೆ ಮೈತ್ರಿ ಹೊಂದಿರುವ ಪಾರ್ಟಿಯೆಟ್ ಸೆಂಟ್ರಮ್, ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಡಿರುವ ಕೆಲಸಗಳನ್ನು ಪರಿಗಣಿಸಿ, ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ ಎಂದು ತಿಳಿಸಲು ನಮಗೆ ಹರ್ಷವಾಗುತ್ತಿದೆ” ಎಂದು ಹೇಳಿದೆ.

ಇದಕ್ಕೂ ಮುನ್ನ, ದಕ್ಷಿಣ ಏಶ್ಯದಲ್ಲಿ ಶಾಂತಿ ಸ್ಥಾಪಿಸಲು ಇಮ್ರಾನ್ ಮಾಡಿದ್ದ ಪ್ರಯತ್ನಗಳನ್ನು ಪರಿಗಣಿಸಿ, 2019ರಲ್ಲೂ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿತ್ತು.

ಪ್ರತಿ ವರ್ಷ ನೂರಾರು ನಾಮನಿರ್ದೇಶನಗಳನ್ನು ಸ್ವೀಕರಿಸುವ ನಾರ್ವೆ ನೊಬೆಲ್ ಸಮಿತಿಯು, ಎಂಟು ತಿಂಗಳ ಸುದೀರ್ಘ ಪ್ರಕ್ರಿಯೆಯ ನಂತರ ನೊಬೆಲ್ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡುತ್ತದೆ ಎಂದು The Express Tribune ವರದಿ ಮಾಡಿದೆ.

ಪಾಕಿಸ್ತಾನದ ಮುಖ್ಯ ವಿರೋಧ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್ ಇ-ಇನ್ಸಾಫ್ ಪಕ್ಷದ ಸಂಸ್ಥಾಪಕರಾದ ಇಮ್ರಾನ್ ಖಾನ್, ಅಧಿಕಾರ ದುರ್ಬಳಕೆ ಹಾಗೂ ಭ್ರಷ್ಟಾಚಾರವೆಸಗಿದ ಆರೋಪದಲ್ಲಿ 14 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಆಗಸ್ಟ್ 2023ರಿಂದ ಸೆರೆವಾಸದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News