ಉಕ್ರೇನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ: ಅಧ್ಯಕ್ಷ ಝೆಲೆನ್ಸ್ಕಿ ಜೊತೆಗೆ ದ್ವಿಪಕ್ಷೀಯ ಮಾತುಕತೆ

Update: 2024-08-23 09:46 GMT

Photo:X/@narendramodi

ಕೈವ್ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೈವ್‌ನಲ್ಲಿ ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದರು. ಇದು ಉಕ್ರೇನ್‌ಗೆ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ.

ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ರಶ್ಯ ಮತ್ತು ಉಕ್ರೇನ್ ನಡುವಿನ ಯುದ್ಧದ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ರಷ್ಯಾದ ಆಕ್ರಮಣದ ನಂತರ ಎರಡೂವರೆ ವರ್ಷಗಳಿಂದ ಉಲ್ಬಣಗೊಂಡಿರುವ ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷಕ್ಕೆ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ದ್ವಿಪಕ್ಷೀಯ ಮಾತುಕತೆ ಗಮನಹರಿಸುವ ನಿರೀಕ್ಷೆಯಿದೆ.

ಉಕ್ರೇನ್‌ನಲ್ಲಿರುವ ಭಾರತೀಯರು ಪ್ರಧಾನಿ ಮೋದಿಯವರಿಗೆ ಆತ್ಮೀಯ ಸ್ವಾಗತ ನೀಡಿದರು.

ತಮ್ಮ ಭೇಟಿಯ ಮೊದಲು ಹೇಳಿಕೆಯಲ್ಲಿ, ಮೋದಿ ಅವರು ಯುದ್ಧಭೂಮಿಯಲ್ಲಿ ನಿಂತುಕೊಂಡು ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ. ಸಾಧ್ಯವಾದಷ್ಟು ಬೇಗ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗಾಗಿ ಭಾರತದ ಬೆಂಬಲವನ್ನು ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News