ಬಾಂಗ್ಲಾದ ಮುಖ್ಯ ಸಲಹೆಗಾರ ಯೂನಸ್ ಜತೆ ಪ್ರಧಾನಿ ಮೋದಿ ಮಾತುಕತೆ

ಮುಹಮ್ಮದ್ ಯೂನಸ್ , ನರೇಂದ್ರ ಮೋದಿ | PTI
ಬ್ಯಾಂಕಾಕ್: ಬಿಮ್‍ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್‍ರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದೇಶದೊಂದಿಗಿನ ರಚನಾತ್ಮಕ ಮತ್ತು ಜನ - ಕೇಂದ್ರಿತ ಸಂಬಂಧಕ್ಕೆ ಭಾರತ ಬದ್ಧವಾಗಿದೆ ಎಂದರು.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪದಚ್ಯುತಗೊಂಡ ಬಳಿಕ ಮೋದಿ, ಯೂನಸ್ ನಡುವಿನ ಮೊದಲ ಸಭೆ ಇದಾಗಿದೆ.
ಶೇಖ್ ಹಸೀನಾಗೆ ಭಾರತ ಆಶ್ರಯ ನೀಡಿರುವುದು, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಿದೆ ಎಂಬ ವರದಿಯ ಬಳಿಕ ದ್ವಿಪಕ್ಷೀಯ ಸಂಬಂಧದಲ್ಲಿ ಬಿರುಕು ಮೂಡಿತ್ತು. `ಬಾಂಗ್ಲಾದಲ್ಲಿ ಶಾಂತಿ, ಸ್ಥಿರತೆ, ಅಂತರ್ಗತೆ ಮತ್ತು ಪ್ರಜಾಪ್ರಭುತ್ವಕ್ಕೆ ಭಾರತದ ಬೆಂಬಲವನ್ನು ಭಾರತ ಪುನರುಚ್ಚರಿಸಿದೆ. ಅಕ್ರಮ ಗಡಿ ದಾಟುವಿಕೆಯನ್ನು ತಡೆಗಟ್ಟುವ ಕ್ರಮಗಳ ಬಗ್ಗೆ, ಹಿಂದುಗಳು ಹಾಗೂ ಇತರ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ನಮ್ಮ ಗಂಭೀರ ಕಾಳಜಿಯನ್ನು ವ್ಯಕ್ತಪಡಿಸಿದ್ದೇವೆ' ಎಂದು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.