ಕೆನಡಾ ಶಾಂತಿಯುತ ಪ್ರತಿಭಟನೆಯ ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ: ಪ್ರಧಾನಿ ಜಸ್ಟಿನ್ ಟ್ರೂಡೊ
Update: 2023-09-10 17:56 GMT
ಒಟ್ಟಾವ: ಕೆನಡಾ ಯಾವತ್ತೂ ಆತ್ಮಸಾಕ್ಷಿಯ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿಯುತ ಪ್ರತಿಭಟನೆಯ ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಮತ್ತು ಇದು ನಮಗೆ ಅತ್ಯಂತ ಮುಖ್ಯವಾಗಿದೆ. ಅದೇ ಸಮಯದಲ್ಲಿ ನಾವು ಹಿಂಸೆಯನ್ನು ತಡೆಗಟ್ಟಲು ಮತ್ತು ದ್ವೇಷದ ಕ್ರಮಗಳನ್ನು ಹಿಮ್ಮೆಟ್ಟಿಸಲು ಆದ್ಯತೆ ನೀಡುತ್ತೇವೆ' ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಹೇಳಿದ್ದಾರೆ.
ಕೆನಡಾದಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳ ಚಟುವಟಿಕೆ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಟ್ರೂಡೊ ` ಸಮುದಾಯದ ವಿಷಯದಲ್ಲಿ ಹೇಳುವುದಾದರೆ, ಕೆಲವರ ಕ್ರಮಗಳು ಇಡೀ ಸಮುದಾಯ ಅಥವಾ ಕೆನಡಾವನ್ನು ಪ್ರತಿನಿಧಿಸುವುದಿಲ್ಲ ಎಂಬುದನ್ನು ನೆನಪಲ್ಲಿ ಇಟ್ಟುಕೊಳ್ಳುವುದು ಮುಖ್ಯವಾಗಿದೆ. ನಾವು ಕಾನೂನಿನ ನಿಯಮವನ್ನು ಗೌರವಿಸುವ ಕಾರ್ಯವನ್ನು ಮಾಡುತ್ತಿದ್ದೇವೆ' ಎಂದು ಹೇಳಿದರು.