ಗಾಝಾ ಮಧ್ಯಸ್ಥಿಕೆಯಿಂದ ಹಿಂದೆ ಸರಿದ ಖತರ್ : ವರದಿ
Update: 2024-11-18 16:20 GMT
ದೋಹ : ಗಾಝಾ ಕದನ ವಿರಾಮ ಒಪ್ಪಂದಕ್ಕೆ ನಡೆಸುತ್ತಿರುವ ಮಧ್ಯಸ್ಥಿಕೆಯನ್ನು ನಿಲ್ಲಿಸಲು ನಿರ್ಧರಿಸಿದೆ. ಸಂಧಾನ ಮಾತುಕತೆಯಲ್ಲಿ ತೊಡಗಿಸಿಕೊಳ್ಳಲು ಹಮಾಸ್ ಮತ್ತು ಇಸ್ರೇಲ್ ಎರಡೂ ನಿರಾಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ವರದಿ ಮಾಡಿದೆ.
ಮಾತುಕತೆಗೆ ಇಸ್ರೇಲ್ ಮತ್ತು ಹಮಾಸ್ ಪ್ರಾಮಾಣಿಕ ಇಚ್ಛೆಯನ್ನು ಪ್ರದರ್ಶಿಸುವವರೆಗೆ ಮಧ್ಯಸ್ಥಿಕೆ ಪ್ರಯತ್ನವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಅಲ್ಲದೆ ದೋಹಾದಲ್ಲಿನ ಹಮಾಸ್ ನ ರಾಜಕೀಯ ಕಚೇರಿಯು ಇನ್ನು ಮುಂದೆ ಅದರ ಉದ್ದೇಶವನ್ನು ಪೂರೈಸುವುದಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಖತರ್ ನ ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.