ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಶ್ರೀಲಂಕಾ ಅಧ್ಯಕ್ಷ ವಿಕ್ರಮಸಿಂಘೆ

Update: 2024-07-07 16:15 GMT

Photo Credit: PTI

ಕೊಲಂಬೊ : ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅವರ ಆಪ್ತರು ರವಿವಾರ ಹೇಳಿದ್ದಾರೆ.

ಚುನಾವಣಾ ಆಯೋಗ ಜುಲೈ 17ರ ಬಳಿಕ ಅಧ್ಯಕ್ಷೀಯ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುವ ನಿರೀಕ್ಷೆಯಿದೆ. `ಅಧ್ಯಕ್ಷೀಯ ಚುನಾವಣೆ ಖಂಡಿತವಾಗಿಯೂ ನಡೆಯಲಿದೆ ಮತ್ತು ವಿಕ್ರಮಸಿಂಘೆ ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ' ಎಂದು ಯುನೈಟೆಡ್ ನ್ಯಾಷನಲ್ ಪಕ್ಷದ ಉಪಾಧ್ಯಕ್ಷ ರುವಾನ್ ವಿಜೆವರ್ಧನೆ ದೃಢಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News