ಉಕ್ರೇನ್ ಒಪ್ಪಂದಕ್ಕಾಗಿ ಯಾವುದೇ ಸಮಯ ಟ್ರಂಪ್ ಭೇಟಿಗೆ ಸಿದ್ಧ: ಪುಟಿನ್ ಘೋಷಣೆ

Update: 2024-12-19 17:12 GMT

ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ | PC : PTI

ಮಾಸ್ಕೋ, ಡಿ.19: ಉಕ್ರೇನ್‍ನಲ್ಲಿ ಕದನ ವಿರಾಮ ಒಪ್ಪಂದದ ಬಗ್ಗೆ ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಮಾತುಕತೆ ನಡೆಸಲು ಯಾವುದೇ ಕ್ಷಣದಲ್ಲೂ ಸಿದ್ಧವಾಗಿರುವುದಾಗಿ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗುರುವಾರ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಉಕ್ರೇನ್ ಯುದ್ಧ ಅಂತ್ಯಕ್ಕೆ ಪ್ರಯತ್ನಿಸುವುದಾಗಿ ಟ್ರಂಪ್ ಹೇಳಿಕೆ ನೀಡಿದ್ದರು. ಟ್ರಂಪ್ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಒತ್ತಡ ಹೇರಬಹುದು ಎಂದು ಉಕ್ರೇನ್ ಆತಂಕ ವ್ಯಕ್ತಪಡಿಸಿತ್ತು. ಈ ಸಂದರ್ಭದಲ್ಲೇ ಪುಟಿನ್ ಕದನ ವಿರಾಮ ಮಾತುಕತೆಯ ಬಗ್ಗೆ ಪ್ರಸ್ತಾಪಿಸಿರುವುದು ಗಮನಾರ್ಹವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News