ಅಧ್ಯಕ್ಷೀಯ ಅಭ್ಯರ್ಥಿ ರೇಸ್‍ನಿಂದ ಹಿಂದೆ ಸರಿದ ರಾನ್ ಡಿಸ್ಯಾಂಟಿಸ್: ಟ್ರಂಪ್‍ಗೆ ಬೆಂಬಲ ಘೋಷಣೆ

Update: 2024-01-22 15:54 GMT

ರಾನ್ ಡಿಸ್ಯಾಂಟಿಸ್: / Photo:PTI

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ ಅಭಿಯಾನದಿಂದ ಹಿಂದೆ ಸರಿಯುವುದಾಗಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಾಗಿ ಫ್ಲೋರಿಡಾ ಗವರ್ನರ್ ರಾನ್ ಡಿಸ್ಯಾಂಟಿಸ್ ಘೋಷಿಸಿದ್ದಾರೆ.

ಇದರೊಂದಿಗೆ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ರೇಸ್‍ನಲ್ಲಿ ಟ್ರಂಪ್ ಹಾಗೂ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲೆ ಉಳಿದುಕೊಂಡಿದ್ದು ಟ್ರಂಪ್ ಆಯ್ಕೆಗೊಳ್ಳುವ ಸಾಧ್ಯತೆ ಹೆಚ್ಚಿದೆ. ನಿಕ್ಕಿ ಹ್ಯಾಲೆ ಡೆಮೊಕ್ರಾಟ್‍ಗಳ ಹಾಗೂ ಜಾಗತಿಕವಾದಿಗಳ ಅಭ್ಯರ್ಥಿಯಾಗಿದ್ದಾರೆ ಎಂದು ಟೀಕಿಸಿರುವ ಟ್ರಂಪ್, ಜಾಣ್ಮೆಯಿಂದ ನಿರ್ಧರಿಸುವ ಕಾಲ ಇದೀಗ ಸನ್ನಿಹಿತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News