ಅಮೆರಿಕದಲ್ಲಿ ಶೂಟೌಟ್ ಒಬ್ಬ ಮೃತ್ಯು; 5 ಮಂದಿಗೆ ಗಾಯ

Update: 2024-03-24 17:41 GMT

ವಾಷಿಂಗ್ಟನ್: ಅಮೆರಿಕದ ಇಂಡಿಯಾನಾಪೊಲಿಸ್ ನಗರದಲ್ಲಿ ರವಿವಾರ ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಪೊಲೀಸ್ ಅಧಿಕಾರಿ ಸಹಿತ ಇತರ 5 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ನಗರದ ಬಾರ್ ಒಂದರ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಮಾತಿನ ಚಕಮಕಿ ಘರ್ಷಣೆಗೆ ತಿರುಗಿದಾಗ ಪೊಲೀಸರು ಅಲ್ಲಿಗೆ ಧಾವಿಸಿದ್ದಾರೆ. ಆಗ ಹಾರಿಸಲಾದ ಗುಂಡೊಂದು ಪೊಲೀಸ್ ಅಧಿಕಾರಿಯನ್ನು ಗಾಯಗೊಳಿಸಿದೆ. ಬಳಿಕ ಪೊಲೀಸರೂ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡ 6 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗಾಯಾಳುಗಳಲ್ಲಿ ಶಂಕಿತ ಆರೋಪಿಯೂ ಸೇರಿರುವ ಸಾಧ್ಯತೆಯಿದೆ. ಶೂಟೌಟ್ ನಡೆದ ಸ್ಥಳದಲ್ಲಿ ಒಂದು ಗನ್ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News