ಅಮೆರಿಕದಲ್ಲಿ ಶೂಟೌಟ್: ಓರ್ವ ಸಾವು

Update: 2024-02-18 17:13 GMT

ನ್ಯೂಯಾರ್ಕ್: ಅಮೆರಿಕದ ಸ್ಯಾನ್‍ಡಿಯಾಗೊ ನಗರದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.

ಸ್ಯಾನ್‍ಡಿಯಾಗೊದ ಯುನಿವರ್ಸಿಟಿ ಸಿಟಿ ಪ್ರದೇಶದ ಶಾಪಿಂಗ್ ಮಾಲ್‍ನ ಬಳಿ ಗುಂಡಿನ ದಾಳಿ ನಡೆದಿದ್ದು ಆರೋಪಿ ಪರಾರಿಯಾಗಿದ್ದಾನೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಮುಂದುವರಿದಿದೆ ಎಂದು ಸ್ಯಾನ್‍ಡಿಯಾಗೊ ಪೊಲೀಸ್ ಇಲಾಖೆಯ ಮುಖ್ಯಾಧಿಕಾರಿ ರಾಬರ್ಟ್ ಹೇಮ್ಸ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News