ಸಿಂಗಾಪುರ: ಕೋವಿಡ್ ಪ್ರಕರಣಗಳಲ್ಲಿ ಏರಿಕೆ

Update: 2023-12-22 17:16 GMT

Photo : PTI

ಸಿಂಗಾಪುರ: ಸಿಂಗಾಪುರದಲ್ಲಿ ಕಳೆದ ವಾರ 965 ಹೊಸ ಕೋವಿಡ್ ಸೋಂಕು ಪ್ರಕರಣ ದಾಖಲಾಗಿದ್ದು ತೀವ್ರ ನಿಗಾ ಘಟಕಕ್ಕೆ ದಾಖಲಾಗಿರುವ ರೋಗಿಗಳ ಸಂಖ್ಯೆ 32ಕ್ಕೇರಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಹೆಚ್ಚಿನ ಕೋವಿಡ್-19 ರೋಗಿಗಳು ಒಮೈಕ್ರಾನ್‍ನ ಉಪರೂಪಾಂತರ ಬಿ.ಎ.2.86ರ ಉಪತಳಿ ಜೆಎನ್.1ನಿಂದ ಸೋಂಕಿಗೆ ಒಳಗಾಗಿದ್ದಾರೆ. ಸರಾಸರಿ ದೈನಂದಿನ ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಕಳೆದ ವಾರ ಗರಿಷ್ಟವಾಗಿದೆ. ಉತ್ತರ ಗೋಳಾರ್ಧದಲ್ಲಿ ಚಳಿಗಾಲದ ಪರಿಸ್ಥಿತಿಗಳು ಮತ್ತು ಹೆಚ್ಚಿನ ಜನರು ಮಾಸ್ಕ್ ಧರಿಸದಿರಲು ಆಯ್ಕೆ ಮಾಡಿಕೊಂಡಿರುವುದು ಕೋವಿಡ್-19 ಪ್ರಕರಣಗಳ ಹೆಚ್ಚಳಕ್ಕೆ ಉತ್ತೇಜನ ನೀಡಿದೆ ಎಂದು ಆರೋಗ್ಯತಜ್ಞರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News