ದಕ್ಷಿಣ ಕೊರಿಯಾ | 181 ಜನರಿದ್ದ ವಿಮಾನ ಪತನ, ಕನಿಷ್ಠ 28 ಮಂದಿ ಮೃತ್ಯು
Update: 2024-12-29 02:29 GMT
ಸಿಯೋಲ್ : 181 ಜನರಿದ್ದ ವಿಮಾನ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಜೆಜು ಏರ್ ಫ್ಲೈಟ್ 2216 ಥೈಲ್ಯಾಂಡ್‌ನಿಂದ ಹಿಂದಿರುಗುತ್ತಿದ್ದಾಗ, ದಕ್ಷಿಣ ಜಿಯೋಲ್ಲಾ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ಯೋನ್‌ಹಾಪ್ ಸುದ್ದಿ ಸಂಸ್ಥೆಯು ವರದಿ ಮಾಡಿದೆ.
ರಕ್ಷಣಾ ಕಾರ್ಯಾಚರಣೆಯ ವೇಳೆ ಒಬ್ಬ ವ್ಯಕ್ತಿ ಜೀವಂತವಾಗಿ ಪತ್ತೆಯಾಗಿದ್ದಾರೆ. ವಿಮಾನದಲ್ಲಿದ್ದ 181 ಮಂದಿಯಲ್ಲಿ 175 ಮಂದಿ ಪ್ರಯಾಣಿಕರು ಮತ್ತು ಆರು ಮಂದಿ ವಿಮಾನ ಸಿಬ್ಬಂದಿ ಸೇರಿದ್ದಾರೆ.
ಲ್ಯಾಂಡಿಂಗ್ ಗೇರ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ತುರ್ತು ನಿರ್ವಹಣಾ ಕಚೇರಿ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದೆ.