ದಕ್ಷಿಣ ಇಸ್ರೇಲ್ | ಗುಂಡಿನ ದಾಳಿಯಲ್ಲಿ ಒಬ್ಬ ಮೃತ್ಯು

Update: 2024-10-15 16:07 GMT

PC : PTI

ಜೆರುಸಲೇಂ : ದಕ್ಷಿಣ ಇಸ್ರೇಲ್ನ್ ಅಶ್ಡೋಡ್ ನಗರದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಸಾವನ್ನಪ್ಪಿದ್ದು ಐದು ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಆಸ್ಪತ್ರೆಯ ಮೂಲಗಳು ಹೇಳಿವೆ.

ಇಸ್ರೇಲ್ನ ವಾಣಿಜ್ಯ ನಗರ ಟೆಲ್ಅ್ವೀವ್ನಹ ದಕ್ಷಿಣಕ್ಕೆ ಸುಮಾರು 30 ಕಿ.ಮೀ ದೂರದ ಅಶ್ಡೋಡ್ನನ ಎರಡು ಕಡೆ ಮಂಗಳವಾರ ಸಂಜೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು ಒಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಆರೋಪಿಯೂ ಪೊಲೀಸರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ಲಭಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News