ಸ್ಪೇನ್ | ನರ್ಸಿಂಗ್ ಹೋಂನಲ್ಲಿ ಬೆಂಕಿ ದುರಂತ ; 10 ಮಂದಿ ಮೃತ್ಯು

Update: 2024-11-15 16:20 GMT

PC : AP

ಮ್ಯಾಡ್ರಿಡ್ : ಸ್ಪೇನ್‍ ನ ಈಶಾನ್ಯ ನಗರ ಝರಗೋಜದ ನರ್ಸಿಂಗ್ ಹೋಂ ನಲ್ಲಿ ನಡೆದ ಬೆಂಕಿ ದುರಂತದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ನರ್ಸಿಂಗ್ ಹೋಂನಲ್ಲಿ 82 ಮಂದಿಯಿದ್ದರು. ಇಲ್ಲಿ ಬುದ್ಧಿಮಾಂದ್ಯತೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಕಾರ್ಯಾಚರಣೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಬೆಂಕಿಯ ತೀವ್ರ ಹೊಗೆ ಸಾವಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News