ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಬಿರುಸಿನ ಮತದಾನ
ಶ್ರೀಲಂಕಾ: 2022ರ ಆರ್ಥಿಕ ಬಿಕ್ಕಟ್ಟಿನ ಬೆನ್ನಲ್ಲಿ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಜನರು ಬಿರುಸಿನಿಂದ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ 38 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಶ್ರೀಲಂಕಾದೊಂದಿಗೆ ಸಾಂಪ್ರದಾಯಿಕ ಸಂಬಂಧಗಳನ್ನು ಹೊಂದಿರುವ ಭಾರತ, ದೇಶದಲ್ಲಿ ಚೀನಾದ ಹೆಚ್ಚುತ್ತಿರುವ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಶ್ರೀಲಂಕಾದಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ. ಶೀಘ್ರದಲ್ಲೇ ಮತ ಎಣಿಕೆ ಆರಂಭವಾಗಲಿದ್ದು, ಸೆ.22ರಂದು ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ಶ್ರೀಲಂಕಾದಲ್ಲಿ 17 ಮಿಲಿಯನ್ ಜನರು ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಿದ್ದಾರೆ.
ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರಿಗೆ ಜನತಾ ವಿಮುಕ್ತಿ ಪೆರಮುನ(ಜೆವಿಪಿ) ಅಭ್ಯರ್ಥಿ ಅನುರ ಕುಮಾರ ಡಿಸಾನಾಯಕೆ ಮತ್ತು ಮಾಜಿ ಅಧ್ಯಕ್ಷ ರಣಸಿಂಗ್ ಅವರ ಪುತ್ರ ಸಜಿತ್ ಪ್ರೇಮದಾಸ ಅವರು ಪ್ರಬಲ ಸ್ಪರ್ಧೆಯನ್ನು ನೀಡುತ್ತಿದ್ದಾರೆ.